ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡೋದಿಲ್ಲ. ಸಿದ್ದರಾಮಯ್ಯನವರೇ ನಮ್ಮ ಮುಖ್ಯಮಂತ್ರಿಗಳು. ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ಶಾಸಕ ಪ್ರದೀಪ್ ಈಶ್ವರ್ ಶನಿವಾರ ಇಲ್ಲಿ ಹೇಳಿದರು.
ಮೈಸೂರು ಮೂಡಾ ಪ್ರಕರಣದಲ್ಲಿ ಕಾನೂನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿಲ್ಲ ಎಂದು ಸ್ಪಷ್ಟವಾಗಿದ್ದು, ನೈತಿಕ ಹೊಣೆ ಹೊತ್ತು ಅವರು ರಾಜೀನಾಮೆ ನೀಡಬೇಕೆಂದು ಮಾಜಿ ಸಚಿವ ಎಚ್.ವಿಶ್ವನಾಥ್ ಆಗ್ರಹಿಸಿದ್ದಾರೆ.
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಯಾವುದೇ ಪಾತ್ರವಿಲ್ಲ. ಅವರ ವಿರುದ್ಧ ಷಡ್ಯಂತ್ರ ನಡೆಸಿದ್ದು, ವಿರೋಧ ಪಕ್ಷಗಳು ವಿನಾಕಾರಣ ಆರೋಪಗಳನ್ನು ಮಾಡುತ್ತಾ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ -ಕಾಂಗ್ರೆಸ್
‘ಮುಡಾ ಪ್ರಕರಣದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ, ಹೀಗಾಗಿ, ರಾಜೀನಾಮೆ ಕೊಡಲ್ಲ. ಕಾನೂನು ಹೋರಾಟ ಮಾಡ್ತೀನಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಮುಡಾ ಪ್ರಕರಣದಲ್ಲಿ ಭ್ರಷ್ಟಾಚಾರದ ಆರೋಪ ಹೊತ್ತಿರುವ ಸಿಎಂ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಆಗ್ರಹಿಸಿದ್ದಾರೆ.