ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಡಾ ಪ್ರಕರಣದ ಹಿನ್ನೆಲೆಯಲ್ಲಿ ತಮಗೆ ಯಾವುದೇ ಟೆನ್ಷನ್ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ಮುಖಂಡರ ಆರೋಪಗಳಿಗೆ ತಿರುಗೇಟು ನೀಡಿದ ಅವರು, ತಮ್ಮ ಸಾಮಾನ್ಯ ಶೈಲಿಯಲ್ಲೇ ಇರುವುದಾಗಿ ಹೇಳಿದ್ದಾರೆ.
ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ನೀಡಲಾದ ಅನುಮತಿ ರದ್ದು ಕೋರಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೆ.9ಕ್ಕೆ ಮುಂದೂಡಿದೆ.
‘ಜನರ ಆಶೀರ್ವಾದ ಇರುವವರೆಗೂ ನನ್ನನ್ನು ಯಾರೂ ಅಲ್ಲಾಡಿಸಲು ಸಾಧ್ಯವಿಲ್ಲ. ಬಡವರ ಪರ ಕೆಲಸ ಮುಂದುವರೆಸುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರೋಧಿಗಳಿಗೆ ತಿರುಗೇಟು ನೀಡಿದ್ದಾರೆ.