ಬಂಡವಾಳ ಬಂದರೆ ಉದ್ಯೋಗ ಸೃಷ್ಟಿಯಾಗಿ ನಿರುದ್ಯೋಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಅನುಕೂಲವಾಗುತ್ತದೆ. ಹೀಗಾಗಿ ಪೊಲೀಸರು ಸಮಾಜದಲ್ಲಿ ಶಾಂತಿ, ನೆಮ್ಮದಿ ಹಾಗೂ ನಿರ್ಭಯದ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ದೆಹಲಿಯಲ್ಲಿ ಪುನರ್ ನಿರ್ಮಾಣಗೊಂಡಿರುವ ಕರ್ನಾಟಕ ಭವನ, ಕೇಂದ್ರ ಹಾಗೂ ರಾಜ್ಯದ ನಡುವೆ ರಾಯಭಾರ ಕಚೇರಿಯಾಗಿ ಕೆಲಸ ಮಾಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಶಾಭಾವ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಹಲವು ಮಹತ್ವದ ಯೋಜನೆ ಜಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಒತ್ತಾಯಿಸಿದ್ದಾರೆ.
ಬೇಸಿಗೆ ಆರಂಭದಲ್ಲೇ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಅದಕ್ಕಾಗಿ ಕೃಷ್ಣಾ ಹಾಗೂ ಭೀಮಾ ನದಿಗಳಿಗೆ ಮಹಾರಾಷ್ಟ್ರದ ಅಣೆಕಟ್ಟುಗಳಿಂದ ನೀರು ಬಿಡುಗಡೆ ಮಾಡುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಫಡ್ನವಿಸ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
ಸಿದ್ದರಾಮಯ್ಯ ಅವರು ಏ.2ರಂದು ಮೂರು ದಿನಗಳ ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ಈ ವೇಳೆ ವರಿಷ್ಠ ರಾಹುಲ್ ಗಾಂಧಿ ಸೇರಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಹನಿಟ್ರ್ಯಾಪ್ ಪ್ರಕರಣವೂ ಸೇರಿ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಯಲ್ಲಿರುವ ಹಲವು ವಿಚಾರಗಳ ಬಗ್ಗೆ ಮಾಹಿತಿಯನ್ನು ನೀಡಲಿದ್ದಾರೆ
ಸಚಿವ ಸಂಪುಟ ಪುನರ್ರಚನೆ ಹಾಗೂ ಪರಿಷತ್ನ ಖಾಲಿ ಸ್ಥಾನಗಳ ನೇಮಕದ ಕುರಿತು ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಭಾನುವಾರ ಮಹತ್ವದ ಚರ್ಚೆ ನಡೆಸಿದ್ದು, ಅಂತಿಮ ಹಂತದ ಚರ್ಚೆಗೆ ಮುಂದಿನ ವಾರ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.