ಇಂದಿನಿಂದ ಒಂದು ತಿಂಗಳ ಕಾಲ ಸಂವಿಧಾನ ಜಾಗೃತಿ ಜಾಥಾ: ಸಿಎಂ ಸಿದ್ದರಾಮಯ್ಯ
Jan 26 2024, 01:47 AM ISTಸಂವಿಧಾನ ಜಾರಿಯಾಗಿ 75 ವರ್ಷವಾಗಿದೆ. ಈ ವೇಳೆ ಸಂವಿಧಾನವು ಇಷ್ಟು ವರ್ಷ ಹೇಗೆ ಕೆಲಸ ಮಾಡಿದೆ ಮತ್ತು ಸಂವಿಧಾನ ಜಾರಿಯ ಹಾದಿಯಲ್ಲಿ ಮುಂದೆ ಇರುವ ಸವಾಲುಗಳು ಎಂತವು ಎಂಬುದನ್ನು ನಾವು ಅರಿಯಬೇಕಿದೆ. ಒಂದು ತಿಂಗಳವರೆಗೆ ರಾಜ್ಯಾದ್ಯಂತ ಜಾಥಾ ನಡೆಸುವುದು, ಒಂದು ವಾಹನದ ಮೇಲೆ ಸ್ತಬ್ಧಚಿತ್ರದೊಂದಿಗೆ ಎಲ್.ಇ.ಡಿ ಪರದೆ ಜೋಡಿಸುವ ಮೂಲಕ ಸಂವಿಧಾನ ಮಹತ್ವ ಏನು? ಅದು ರೂಪುಗೊಂಡು ಜಾರಿಯಾದ ಬಗೆ ಹೇಗೆ ಎಂಬ ವಿವರವನ್ನು ಜನರಿಗೆ ತೋರಿಸಲಾಗುತ್ತದೆ.