ಸಿನಿಮಾ ರೀತಿ ರಾಜಕೀಯದಲ್ಲೂ ರೀಲ್ ಬಿಟ್ಟರೆ ಜನ ಒಪ್ಪಲ್ಲ: ಸುರೇಶ್
Mar 29 2024, 12:56 AM ISTರಾಮನಗರ: ನನ್ನನ್ನು ಸೋಲಿಸಲು ನಿರ್ದೇಶಕ, ನಿರ್ಮಾಪಕ, ಚಿತ್ರಕತೆ ಬರೆಯುವವರು, ನಟ, ಬಂಡವಾಳ ಹೂಡಿಕೆ ಮಾಡುವವರು ಎಲ್ಲಾ ಒಂದಾಗಿದ್ದಾರಂತೆ. ಸಿನಿಮಾದಲ್ಲಿ ರೀಲ್ ಬಿಟ್ಟಂತೆ ಇಲ್ಲಿ ಬಿಟ್ಟರೇ ಜನ ಒಪ್ಪುವುದಿಲ್ಲ ಎಂದು ತಮ್ಮ ರಾಜಕೀಯ ಎದುರಾಳಿಗಳ ವಿರುದ್ಧ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ವಾಗ್ದಾಳಿ ನಡೆಸಿದರು.