ಸಿದ್ದಸಿರಿ ಸೌಹಾರ್ದಾ ಸಹಕಾರ ನಿಯಮಿತ ಸಿದ್ದಸಿರಿ ಎಥೆನಾಲ್ ಪವರ ಘಟಕ ಪ್ರಾರಂಭಿಸಲು ಸುಪ್ರಿಂಕೋರ್ಟ ಶುಕ್ರವಾರ ಐತಿಹಾಸಿಕ ತೀರ್ಪು ನೀಡಿದ ಹಿನ್ನೆಲೆ ಪಟ್ಟಣದ ಬಸವೇಶ್ವರ ಚೌಕನಲ್ಲಿ ಹಾಗೂ ಬಸ್ ನಿಲ್ದಾಣ ಹತ್ತಿರದಲ್ಲಿ ರೈತರು ಪಟಾಕಿ ಸಿಡಿಸಿ ಸಿಹಿತಿಂಡಿ ಹಂಚಿಕೊಂಡು ಸಂಭ್ರಮಾಚರಣೆ ಮಾಡಿದರು.
ಕಡಬದ ಮಸೀದಿಯಲ್ಲಿ ಜೈಶ್ರೀರಾಮ್ ಎಂದು ಘೋಷಣೆ ಕೂಗಿದವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಕೇಸ್ ರದ್ದುಪಡಿಸಿದ್ದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ಆರಂಭಿಸಿರುವ ಸುಪ್ರೀಂ ಕೋರ್ಟ್, ‘ಜೈ ಶ್ರೀರಾಮ್ ಎನ್ನುವುದು ಅಪರಾಧ ಹೇಗಾದೀತು?’ ಎಂದು ಪ್ರಶ್ನಿಸಿದೆ.
‘ವಿವಾಹಿತ ಮಹಿಳೆಯರು ಸ್ವಾರ್ಥಕ್ಕಾಗಿ ತಮ್ಮ ಪತಿ ಮತ್ತು ಅತ್ತೆ-ಮಾವಂದಿರಿಗೆ ಕಿರುಕುಳ ನೀಡಲು ವರದಕ್ಷಿಣೆ ಕಿರುಕುಳ ತಡೆ ಕಾಯ್ದೆಯಂಥ ಕಾನೂನುಗಳನ್ನು ವ್ಯಾಪಕವಾಗಿ ಬಳಸುತ್ತಿದ್ದಾರೆ. ನ್ಯಾಯಾಲಯಗಳು ಇಂಥ ಪ್ರಕರಣಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಇತ್ಯರ್ಥಪಡಿಸಬೇಕು’ ಎಂದು ಸುಪ್ರೀಂ ಕೋರ್ಟ್ ಕಳವಳ
ಐಪಿಎಸ್ ಅಧಿಕಾರಿ ಡಿ.ರೂಪಾ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದಾಖಲಿಸಿರುವ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಲು ಸುಪ್ರೀಂಕೋರ್ಟ್ ನಿರಾಕರಿಸಿದ್ದು, ಹೈಕೋರ್ಟ್‌ನಲ್ಲಿ ಪ್ರಕರಣ ಇತ್ಯರ್ಥಪಡಿಸಿಕೊಳ್ಳುವಂತೆ ಸೂಚಿಸಿದೆ.
ಸುಪ್ರೀಂ ಕೋರ್ಟ್ ನಿರ್ದೇಶನದಂತೆ ರಾಜ್ಯ ಪಠ್ಯಕ್ರಮದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ 5, 8 ಮತ್ತು 9ನೇ ತರಗತಿ ಮತ್ತು ಪಿಯು ಕಾಲೇಜುಗಳ 11ನೇ ತರಗತಿ ವಿದ್ಯಾರ್ಥಿಗಳಿಗೆ ಈ ಬಾರಿ ಮಂಡಳಿ ಪರೀಕ್ಷೆ ಇರುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.
‘ಅನಾಮಧೇಯ ಚುನಾವಣಾ ಬಾಂಡ್’ಗಳ ಯೋಜನೆಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳನ್ನು ವಜಾಗೊಳಿಸಲಾಗಿದೆ.