ಅಭಿವೃದ್ಧಿಗೆ ಮೀಸಲಿದ್ದ ಹಣ ಅಕ್ರಮವಾಗಿ ವರ್ಗ: ಬಿಜೆಪಿ ಯುವ ಮೋರ್ಚಾ
Jun 02 2024, 01:45 AM IST ಯೂನಿಯನ್ ಬ್ಯಾಂಕ್ ಮೂಲಕ ಕೆಲವು ಕಂಪನಿಗಳಿಗೆ ಹಣ ಅಕ್ರಮವಾಗಿ ವರ್ಗಾವಣೆ ಮಾಡಿದ್ದು, ಕಾಂಗ್ರೆಸ್ ಪಕ್ಷ ಚುನಾವಣಾ ಖರ್ಚಿಗಾಗಿ ದಲಿತ ಸಮುದಾಯದ ಅಭಿವೃದ್ಧಿಗೆ ಮೀಸಲಿದ್ದ ಹಣ ವೆಚ್ಚ ಮಾಡಿದೆ ಎನ್ನುವ ಅನುಮಾನ ವ್ಯಾಪಕವಾಗಿ ಕೇಳಿ ಬರುತ್ತಿದ್ದು, ಕಾಂಗ್ರೆಸ್ಸಿನ ಭ್ರಷ್ಟಾಚಾರಕ್ಕೆ ಹಿಡಿದ ಕನ್ನಡಿ ಇದಾಗಿದ್ದು, ತಕ್ಷಣ ಸಚಿವ ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಪ್ರಕರಣದಲ್ಲಿ ಯಾರು ಭಾಗಿಯಾಗಿದ್ದಾರೋ ಎಲ್ಲಾ ಸಚಿವರು ರಾಜೀನಾಮೆ ನೀಡಬೇಕು.