ಬಾಳೆಲೆ: ಹುಲಿ ಸೆರೆ ಕಾರ್ಯಾಚರಣೆ ಶುರು
Oct 19 2024, 12:16 AM ISTದಕ್ಷಿಣ ಕೊಡಗಿನ ವೆಸ್ಟ್ ನೆಮ್ಮಲೆ ಗ್ರಾಮದಲ್ಲಿ ಹುಲಿ ಸೆರೆಗೆ ಕೂಂಬಿಂಗ್ ಆಪರೇಷನ್ ನಡೆಸಿ ಹುಲಿಯನ್ನು ವಾಸ ಸ್ಥಾನ ಅರಣ್ಯಕ್ಕೆ ಕಳುಹಿಸಿದ ಯಶಸ್ವಿ ಕಾರ್ಯಾಚರಣೆಯ ಬೆನ್ನಲ್ಲೇ ಮತ್ತೊಂದು ಕಾರ್ಯಾಚರಣೆಗೆ ಶುರುವಾಗಿದೆ.ಹುಲಿ ಬಾಧಿತವಾಗಿರುವ ದಕ್ಷಿಣ ಕೊಡಗಿನ ಬಾಳೆಲೆ ವ್ಯಾಪ್ತಿಯಲ್ಲಿ ಜಾನುವಾರಗಳ ಮೇಲೆ ದಾಳಿ ನಡೆಸುತ್ತಿರುವ ಹುಲಿ ಸೆರೆ ಹಿಡಿಯಲು ಅನುಮತಿ ಸಹಿತ ಕಾರ್ಯಾಚರಣೆ ಶುಕ್ರವಾರ ಆರಂಭವಾಗಿದೆ.