ಮೌಲ್ಯಯುತ ಕವನಗಳು ಹೃದಯ ತಟ್ಟುತ್ತವೆ
Aug 11 2024, 01:33 AM ISTಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಮೌಲ್ಯಯುತ ಕವನಗಳು ಜನಸಾಮಾನ್ಯರ ಹೃದಯ ತಟ್ಟುತ್ತವೆ ಎಂದು ಹಿರಿಯ ಸಾಹಿತಿ ಪ್ರೊ.ಬಿ.ಎಂ.ಹಿರೇಮಠ ಹೇಳಿದರು. ಮುದ್ದೇಬಿಹಾಳ ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಮಂಗಲ ಕಾಯಾ೯ಲಯದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತಾಲೂಕ ಕನ್ನಡ ಸಾಹಿತ್ಯ ಪರಿಷತ್ತು ಮುದ್ದೇಬಿಹಾಳ ಹಾಗು ಅಲ್ಪಸಂಖ್ಯಾತರ ಮುರಾರ್ಜಿ ದೇಸಾಯಿ ವಸತಿ ಶಾಲೆ ಮುದ್ದೇಬಿಹಾಳ ಆಶ್ರಯದಲ್ಲಿ ಜರುಗಿದ ಶ್ರಾವಣ ಕಾವ್ಯ ಸಂಭ್ರಮ ಉದ್ಘಾಟಿಸಿ ಮಾತನಾಡಿದರು. ಕನ್ನಡಕ್ಕಾಗಿ ದುಡಿದವರನ್ನು ಸ್ಮರಿಸುವ ಕಾಯ೯ಕ್ರಮ ಶ್ಲಾಘನೀಯ ಎಂದರು.