ಸ್ಮಾರ್ಟ್ ಮೀಟರ್‌ಗಳಿಗೆ ದುಬಾರಿ ಬೆಲೆ ನಿಗದಿಪಡಿಸಿರುವ ಬೆಸ್ಕಾಂ ಮತ್ತು ಸರ್ಕಾರದ ಕ್ರಮವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಹೈಕೋರ್ಟ್
ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳ ಇತರೆ ಹೈಕೋರ್ಟ್‌ಗೆ ವರ್ಗಾಯಿಸಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಕೈಗೊಂಡಿರುವ ಶಿಫಾರಸು ವಿರೋಧಿಸಿ ವಕೀಲರು ಬುಧವಾರ ಹೈಕೋರ್ಟ್ ಸೇರಿ ನಗರದ ಎಲ್ಲ ನ್ಯಾಯಾಲಯಗಳ ಕಲಾಪಗಳನ್ನು ಬಹಿಷ್ಕರಿಸಿದರು.
ರಾಜ್ಯ ಹೈಕೋರ್ಟ್‌ನ ನಾಲ್ವರು ನ್ಯಾಯಮೂರ್ತಿಗಳನ್ನು ದೇಶದ ಇತರೆ ಹೈಕೋರ್ಟ್‌ಗಳಿಗೆ ವರ್ಗಾವಣೆ ಮಾಡಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ.
‘ಎಲ್ಲಾದರೂ ಹೋಗಿ ಸಾಯಿ’ ಎಂದು ವ್ಯಕ್ತಿಯೊಬ್ಬರಿಗೆ ಹೇಳುವುದು ಆತ್ಮಹತ್ಯೆಗೆ ಪ್ರಚೋದನೆ ನೀಡಿದಂತಾಗುವುದಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ದಿನಗೂಲಿ ಆಧಾರದಲ್ಲಿ ಸತತ 30 ವರ್ಷ ಅರಣ್ಯ ವೀಕ್ಷಕ/ಚಾಲಕ ಉದ್ಯೋಗದಲ್ಲಿ ಕಾರ್ಯನಿರ್ವಹಿಸಿದ ದಿನಗೂಲಿ ನೌಕರನ ಸೇವೆ ಕಾಯಂಗೊಳಿಸಲು ರಾಜ್ಯ ಸರ್ಕಾರ ಮತ್ತು ಅರಣ್ಯ ಇಲಾಖೆಗೆ ಆದೇಶ
ನಗರ ಪಾಲಿಕೆಗಳು, ಪುರಸಭೆ, ಪಟ್ಟಣ ಪಂಚಾಯ್ತಿಯಂತಹ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಮರ ಪ್ರಾಧಿಕಾರ ರಚಿಸಲು 5 ತಿಂಗಳ ಕಾಲಾವಕಾಶ ನೀಡಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಈ ಆದೇಶವನ್ನು ಸರ್ಕಾರ ಪಾಲನೆ ಮಾಡಬೇಕು ಎಂದು ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಂಘ ಒತ್ತಾಯಿಸಿದೆ.
ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಸದಸ್ಯರ ನೇಮಕಾತಿಗೆ ಈವರೆಗೂ ಶೋಧನಾ ಸಮಿತಿಯನ್ನೇ ರಚಿಸದ ರಾಜ್ಯ ಸರ್ಕಾರಗಳ ಧೋರಣೆಯನ್ನು ಕಟು ಶಬ್ದಗಳಿಂದ ಖಂಡಿಸಿರುವ ಹೈಕೋರ್ಟ್
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು ಕಚೇರಿಯ ಆವರಣದಲ್ಲಿ ಅಂಗವಿಕಲನೋರ್ವ ಹೊಂದಿದ್ದ ಜೆರಾಕ್ಸ್ ಮತ್ತು ಕಂಪ್ಯೂಟರ್ ಅಂಗಡಿಯನ್ನು ತೆರವುಗೊಳಿರುವ ಹಿನ್ನೆಲೆಯಲ್ಲಿ ಮತ್ತೆ ಮಳಿಗೆ ಆರಂಭಿಸಲು ಸ್ಥಳಾವಕಾಶ ಕಲ್ಪಿಸುವ ಮನವಿ ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.