ಕರಾವಳಿಯಲ್ಲಿ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮತ್ತೆ ಹಿನ್ನಡೆ!
Mar 11 2025, 12:46 AM IST ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಯ ಹೋರಾಟಕ್ಕೆ ಇದೀಗ ಮತ್ತೆ ಹಿನ್ನಡೆ ಉಂಟಾಗಿದೆ. ವಿಧಾನ ಪರಿಷತ್‌ನಲ್ಲಿ ಎಂಎಲ್ಸಿ ಐವನ್ ಡಿಸೋಜ ಅವರು ಕೇಳಿದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರು ‘ಸರ್ಕಾರದ ಎದುರು ಅಂತಹ ಯಾವುದೇ ಪ್ರಸ್ತಾಪ ಇಲ್ಲ’ ಎಂದು ಲಿಖಿತ ಉತ್ತರ ನೀಡಿದ್ದಾರೆ.