ಎಪಿಎಂಸಿಯಲ್ಲಿ ಪಟಾಕಿ ಅಂಗಡಿ
Nov 01 2024, 12:11 AM ISTಹೊಳೆನರಸೀಪುರ ಪಟ್ಟಣದ ಅರಕಲಗೂಡು ರಸ್ತೆಯ ಅಗ್ನಿಶಾಮಕ ಠಾಣೆ ಸಮೀಪವಿರುವ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ತೆರೆಯಲಾಗಿದ್ದು, ಪಟ್ಟಣದಿಂದ ಒಂದು ಕಿ.ಮೀ.ಗೂ ಹೆಚ್ಚು ದೂರವಿರುವ ಪಟಾಕಿ ಅಂಗಡಿಗಳಲ್ಲಿ ಗ್ರಾಹಕರಿಲ್ಲದೇ ವ್ಯಾಪಾರ ಕುಸಿದಿದೆ. ಎಪಿಎಂಸಿ ಮಾರುಕಟ್ಟೆಗೆ ತರಕಾರಿ ಮಾರುಕಟ್ಟೆ ಸ್ಥಳಾಂತರಿಸುವ ಸಲುವಾಗಿ ಸಿಕ್ಕ ಅವಕಾಶವನ್ನು ಬಳಸಿಕೊಂಡು ಪರೀಕ್ಷಾರ್ಥವಾಗಿ ಪಟಾಕಿ ಅಂಗಡಿಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿದ್ದು, ತರಕಾರಿ ಮಾರುಕಟ್ಟೆಯ ವರ್ತಕರ ಆತಂಕಕ್ಕೆ ಕಾರಣವಾಗಿದೆ.