ರುಚಿಕಟ್ಟಾದ ಅಡುಗೆ ತಯಾರಿಕೆ ಒಂದು ಕಲೆ: ಶಾಸಕ ಭೀಮಸೇನ ಚಿಮ್ಮನಕಟ್ಟಿ

Jan 21 2024, 01:32 AM IST
ಬಾದಾಮಿ: ನಗರದ ಶ್ರೀ ವೀರಪುಲಿಕೇಶಿ ಸಂಸ್ಥೆಯ ಬಸವಭವನದಲ್ಲಿ ತಾಪಂ, ಪ್ರಧಾನಮಂತ್ರಿ ಪೋಷಣ್‌ ಶಕ್ತಿ ಅಭಿಯಾನ ಹಾಗೂ ಅಕ್ಷರ ದಾಸೋಹ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ತಾಲೂಕಿನ ಸರ್ಕಾರಿ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮುಖ್ಯ ಅಡುಗೆ ಸಿಬ್ಬಂದಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ಮತ್ತು ತಾಲೂಕು ಮಟ್ಟದ ಅಡುಗೆ ತಯಾರಿಕಾ ಸ್ಪರ್ಧೆ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಶಾಸಕ ಭೀಮಸೇನ ಚಿಮ್ಮನಕಟ್ಟಿ, ರುಚಿಕಟ್ಟಾದ ಅಡುಗೆ ತಯಾರಿಸುವುದು ಸಹ ಒಂದು ಕಲೆ. ಶಾಲೆ ಮತ್ತು ಮನೆಗಳಲ್ಲಿ ರುಚಿಶುಚಿಯಾದ ಅಡುಗೆ ತಯಾರಿಕೆಯಲ್ಲಿ ಅಡುಗೆ ಸಿಬ್ಬಂದಿ ಪಾತ್ರ ಪ್ರಮುಖವಾಗಿದೆ ಎಂದು ಹೇಳಿದರು.