ಜನಪ್ರತಿನಿಧಿಗಳು, ಅಧಿಕಾರಿ ಒಟ್ಟಿಗೆ ಸೇರಿ ಸಮಸ್ಯೆ ಬಗೆಹರಿಸಬೇಕು: ಕೋಟಾ ಶ್ರೀನಿವಾಸ್ ಪೂಜಾರಿ
Aug 30 2025, 01:00 AM ISTಚಿಕ್ಕಮಗಳೂರುಸಮಸ್ಯೆ ಪರಿಹಾರ ಮಾಡುವಾಗ ಸಮಸ್ಯೆ ಸೃಷ್ಠಿ ಮಾಡುವವರೂ ಜೊತೆಗಿರಬೇಕು. ಇಲ್ಲದಿದ್ದಲ್ಲಿ ಸಮಸ್ಯೆ ಪರಿಹಾರವಾಗುವುದಿಲ್ಲ. ಮಲೆನಾಡಿನಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಅವುಗಳಲ್ಲಿ ಕೆಲವು ಕೇಂದ್ರ, ಇನ್ನು ಕೆಲವು ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುತ್ತವೆ. ಹೀಗಾಗಿ ರಾಜ್ಯ, ಕೇಂದ್ರ ಸರ್ಕಾರದ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸೇರಿ ಮುಂದಿನ ಪೀಳಿಗೆಗೆ ಇಲ್ಲಿನ ಸಮಸ್ಯೆ ಇರದಂತೆ ನೋಡಿಕೊಳ್ಳಬೇಕು ಎಂದು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.