ಸಂಚಾರಿ ನಿಯಮ ಪಾಲನೆಯಿಂದ ಅಪಘಾತಗಳ ತಡೆ ಸಾಧ್ಯ: ಆರ್ಟಿಒ ಅಧಿಕಾರಿ ಮಲ್ಲಿಕಾರ್ಜುನ್
Feb 13 2024, 12:45 AM ISTರಸ್ತೆ ಅಪಘಾತಗಳು ಸಂಭವಿಸಿ ಸಾವು-ನೋವು ಉಂಟಾಗಲು ವಾಹನ ಚಾಲಕರ ಅಜಾಗರೂಕತೆಯೇ ಮುಖ್ಯ ಕಾರಣ. ದ್ವಿಚಕ್ರ ಸೇರಿದಂತೆ ಯಾವುದೇ ವಾಹನ ಚಾಲನೆ ಮಾಡುವ ವ್ಯಕ್ತಿ ಚಾಲನಾ ಪರವಾನಗಿ ಜೊತೆಗೆ ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ತಿಳಿದುಕೊಂಡಿರಬೇಕು. ವಾಹನ ಚಾಲನೆ ಸಮಯದಲ್ಲಿ ಮೊಬೈಲ್ ಬಳಕೆ ಮಾಡುವುದು, ಮದ್ಯಪಾನ ಸೇವನೆ, ರಸ್ತೆಯಲ್ಲಿ ಅಡ್ಡಾದಿಡ್ಡಿ ಚಾಲನೆ ಮಾಡುವುದರಿಂದ ಅಪಘಾತಗಳು ಸಂಭವಿಸಿ, ಇಡೀ ಕುಟುಂಬವೇ ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ನಿರ್ಮಾಣವಾಗುತ್ತದೆ.