ರಾಜ್ಯೋತ್ಸವಕ್ಕೆ ಅಧಿಕಾರಿ, ಸಿಬ್ಬಂದಿ ಭಾಗಿ ಕಡ್ಡಾಯ
Oct 22 2024, 12:18 AM ISTಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲಾಡಳಿತದಿಂದ ನ.೧ರಂದು ಆಚರಿಸಲಾಗುವ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಭಾಗವಹಿಸಿ ಕನ್ನಡಾಭಿಮಾನ ಮೆರೆಯಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ನಾಡಿನ ಅತಿ ಮುಖ್ಯವಾದ ಕರ್ನಾಟಕ ರಾಜ್ಯೋತ್ಸವದಲ್ಲಿ ಜಿಲ್ಲೆಯ ಎಲ್ಲ ಅಧಿಕಾರಿಗಳು, ಸಿಬ್ಬಂದಿ, ವಿವಿಧ ಕನ್ನಡ ಪರ ಸಂಘಟನೆಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಸೂಚಿಸಿದರು.