ಮಳೆಯಿಂದ ಕುಸಿದ ಸೇತುವೆ ದುರಸ್ತಿ ಮಾಡದ ಅಧಿಕಾರಿಗಳು ಗ್ರಾಮಸ್ಥರ ಪ್ರತಿಭಟನೆ
Jun 27 2024, 01:03 AM IST2022 ರಲ್ಲಿ ಸುರಿದ ಭೀಕರ ಮಳೆಗೆ ಮಾದಿಹಳ್ಳಿ ಹಳ್ಳದ ಸೇತುವೆ ಕುಸಿದಿತ್ತು. ಇದರಿಂದ ಮಾದಿಹಳ್ಳಿ, ದೇವರಹಳ್ಳಿ, ಕಳ್ಳನಕೆರೆ ಮತ್ತು ಡಿಂಕ ಗ್ರಾಮದ ಜನ 10 ಕಿ.ಮೀ ದೂರದ ಹೋಬಳಿ ಕೇಂದ್ರ ಕಿಕ್ಕೇರಿಗೆ ಬರಲು ಹತ್ತಾರು ಕಿಮೀ ಬಳಸಿ ಬರಬೇಕಾಗಿದೆ. ಶಾಲಾ ಕಾಲೇಜಿಗೆ ಹೋಗಲು ಮಕ್ಕಳು, ರೋಗಿಗಳನ್ನು ಆಸ್ಪತ್ರೆಗೆ ಕರೆದೊಯ್ಯಲು ಪರದಾಡುತ್ತಿದ್ದಾರೆ.