ಅಸ್ಪೃಶ್ಯತೆ ಆಚರಣೆ ಶಿಕ್ಷಾರ್ಹ ಅಪರಾಧ
Oct 24 2024, 12:32 AM ISTಅಸ್ಪೃಶ್ಯತೆ ಆಚರಣೆಯು ಶಿಕ್ಷಾರ್ಹ ಅಪರಾಧವಾಗಿದೆ ಆಲೂರು ತಹಸೀಲ್ದಾರ್ ಸಿ.ಪಿ ನಂದಕುಮಾರ್ ತಿಳಿಸಿದರು. ನಮ್ಮ ದೇಶವು ಜಾತ್ಯತೀತ ರಾಷ್ಟ್ರವಾಗಿರುವುದರಿಂದ ಸಮಾಜದಲ್ಲಿ ಧಾರ್ಮಿಕ ಮತ್ತು ಸಾಮಾಜಿಕ ಪಿಡುಗುಗಳು ಅನಾದಿಕಾಲದಿಂದಲೂ ಬೇರೂರಿವೆ. ಅದರಲ್ಲಿ ಅಸ್ಪೃಶ್ಯತೆ ಆಚರಣೆ ಸಹ ಒಂದಾಗಿದೆ. ಭಾರತದ ಸಂವಿಧಾನವು ಮೂಲಭೂತ ಹಕ್ಕುಗಳಲ್ಲಿ ಸಮಾನತೆಯ ಹಕ್ಕನ್ನು ಕೂಡ ನೀಡಿರುವುದರಿಂದ, ಈ ಭೂಮಿ ಮೇಲೆ ವಾಸಿಸುವ ಪ್ರತಿಯೊಂದು ಪ್ರಾಣಿ, ಪಕ್ಷಿ ಹಾಗೂ ಮನುಷ್ಯನಿಗೂ ಕೂಡ ಸಮಾನತೆಯಿಂದ ಜೀವಿಸುವ ಹಕ್ಕಿದೆ ಎಂದರು.