ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಒಬ್ಬ ಬ್ಲ್ಯಾಕ್ಮೇಲರ್, ಕ್ರಿಮಿನಲ್ ಎಂದು ಹರಿಹಾಯ್ದಿರುವ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ, ಆ ವ್ಯಕ್ತಿ ಬಗ್ಗೆ ನಾನು ಹೇಳಿದ್ದು ಸತ್ಯಮೇವ ಜಯತೇ ಕಾರಣಕ್ಕಾಗಿಯೇ ಎಂದು ತೀಕ್ಷ್ಣವಾಗಿ ಹೇಳಿದ್ದಾರೆ.
ಮಹಿಳೆಯರ ವಿರುದ್ಧ ನಡೆಯುವ ಅಪರಾಧ ಪ್ರಕರಣಗಳಲ್ಲಿ ನ್ಯಾಯಾಂಗವು ತ್ವರಿತವಾಗಿ ತೀರ್ಪು ನೀಡಿದರೆ ಮಹಿಳೆಯರಲ್ಲಿ ಸುರಕ್ಷತಾ ಭಾವನೆ ಹೆಚ್ಚಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು, ‘ಮಹಿಳೆಯರ ಮೇಲೆ ಎಸಗುವ ಅಪರಾಧ ಕೃತ್ಯಗಳಿಗೆ ಕ್ಷಮೆಯಿಲ್ಲ. ಅದು ಮಹಾಪಾಪ’ ಎಂದು ಗುಡುಗಿದ್ದಾರೆ. ಅಲ್ಲದೆ, ‘ಸ್ತ್ರೀಪೀಡಕರಿಗೆ ಕಠಿಣ ಶಿಕ್ಷೆ ನೀಡಲು ಕಾಯ್ದೆಯನ್ನು ನಮ್ಮ ಸರ್ಕಾರ ಬಲಗೊಳಿಸುತ್ತಿದೆ’ ಎಂದಿದ್ದಾರೆ.