ದ್ವೇಷದ ರಾಜಕಾರಣಕ್ಕೆ ಜಿಲ್ಲೆಯ ಅಭಿವೃದ್ಧಿ ಸ್ಥಗಿತ
Feb 25 2025, 12:50 AM ISTದ್ವೇಷದ ರಾಜಕಾರಣಕ್ಕೆ ಜಿಲ್ಲೆಯ ಅಭಿವೃದ್ಧಿ ಕೆಲಸ ಸ್ಥಗಿತವಾಗಿದ್ದು, ಸರ್ಕಾರ ಹಣ ಬಿಡುಗಡೆ ಮಾಡಿದರೂ ಜಿಲ್ಲಾಧಿಕಾರಿ ಹಣ ಬಿಡುಗಡೆ ಮಾಡದೇ ಖಜಾನೆಯಲ್ಲಿಟ್ಟುಕೊಂಡಿರುವುದಾಗಿ ಮಾಜಿ ಸಚಿವ ಎಚ್.ಡಿ. ರೇವಣ್ಣ ಅಸಮಾಧಾನ ವ್ಯಕ್ತಪಡಿಸಿದರು. ಸರ್ಕಾರವು ೧೨ ಕೋಟಿ ಮಳೆಹಾನಿಗೆ ಹಣ ಬಿಡುಗಡೆ ಮಾಡಿದೆ. ಡೀಸಿ ಅದನ್ನು ಹಾಗೆಯೇ ಇಟ್ಟುಕೊಂಡಿದ್ದಾರೆ. ಗುಂಡಿ ಮುಚ್ಚಲು ಡಿಸಿ ಹಣ ಕೊಡುತ್ತಿಲ್ಲ. ಬಿಡುಗಡೆಯಾಗಿರುವ ಹಣವನ್ನು ಖಜಾನೆಯಲ್ಲಿ ಇಟ್ಟುಕೊಂಡಿದ್ದು, ಡಿಸಿಯವರು ಹಣ್ಣು, ಕಾಯಿ ಒಡೆದು ದೀಪ ಹಚ್ಚಿ ಪೂಜೆ ಮಾಡಲಿ ಎಂದು ವ್ಯಂಗ್ಯವಾಡಿದರು.