ಪ್ರಗತಿ ಪಥ ಯೋಜನೆಯಿಂದ ಗ್ರಾಮೀಣ ರಸ್ತೆಗಳ ಅಭಿವೃದ್ಧಿ :ಶಾಸಕ ಗಣೇಶ್ ಪ್ರಸಾದ್
Feb 24 2025, 12:31 AM ISTಗ್ರಾಮೀಣ ರಸ್ತೆಗಳ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಪ್ರಗತಿ ಪಥ ಯೋಜನೆ ಜಾರಿಗೆ ತಂದಿದ್ದು, ಮುಂದಿನ ದಿನಗಳಲ್ಲಿ ಹದಗೆಟ್ಟ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ನಾಂದಿಯಾಗಲಿದೆ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.ತಾಲೂಕಿನ ಕಲ್ಲಿಗೌಡನಹಳ್ಳಿ ಬಳಿಯ ಸಿದ್ದಯ್ಯಪುರ ಗ್ರಾಮದಲ್ಲಿ ಕನಕ ಭವನದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಬರುವ ಮಾ.೧ ರಂದು ಪ್ರಗತಿ ಪಥ ರಸ್ತೆ ಯೋಜನೆಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗು ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಚಾಲನೆ ನೀಡಲಿದ್ದಾರೆ ಎಂದರು.