ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪ್ರಾಮಾಣಿಕವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದೆ. ಇದನ್ನು ಅರ್ಥ ಮಾಡಿಕೊಳ್ಳಬೇಕು. ವಿರೋಧ ಪಕ್ಷದವರು ಅಪಪ್ರಚಾರ ಮಾಡುತ್ತಿದ್ದಾರೆ. ಇಂತಹ ಸುಳ್ಳು, ಅಪಪ್ರಚಾರ, ಬಿಟ್ಟಿ ಕೆಲಸಗಳಲ್ಲಿ ಅವರು ನಿರತರಾಗಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದರು.
ರಾಮನಗರ ಟೌನಿನಲ್ಲಿ ರಸ್ತೆಗಳ ಅಭಿವೃದ್ಧಿಗಾಗಿ ಯುಐಡಿಎಫ್ ಅನುದಾನದಡಿ 83 ಕೋಟಿ ರು. ಬಿಡುಗಡೆಯಾಗಿದ್ದು, ಮೊದಲ ಹಂತದಲ್ಲಿ 63 ಕೋಟಿ ರು. ವೆಚ್ಚದಲ್ಲಿ ರಸ್ತೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದರು.