ಅಲೆಮಾರಿ ಅಭಿವೃದ್ಧಿ ನಿಗಮಕ್ಕೆ ಸರ್ಕಾರದಿಂದ ಅನುದಾನ
Apr 30 2025, 12:31 AM ISTಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮಕ್ಕೆ ಸರ್ಕಾರ 75 ಕೋಟಿ ರು. ಅನುದಾನ ಬಿಡುಗಡೆ ಮಾಡಿದೆ ಎಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ತಿಳಿಸಿದರು. ತಾಲೂಕಿನ ಕೆಲವು ಗ್ರಾಮಗಳಲ್ಲಿ ವಾಸ ಮಾಡುತ್ತಿರುವ ಅಲೆಮಾರಿ ಸಮುದಾಯದ ಜನರ ಸ್ಥಿತಿಗತಿ ಕುರಿತು ಖುದ್ದಾಗಿ ಆಯಾ ಗ್ರಾಮಗಳಿಗೆ ಭೇಟಿ ನೀಡಲು ಆಗಮಿಸಿದ್ದ ಸಂದರ್ಭದಲ್ಲಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ವಸತಿ ಮತ್ತು ನಿವೇಶನ ರಹಿತ ಅಲೆಮಾರಿಸಮುದಾಯದವರಿಗೆ ಸವಲತ್ತುಗಳನ್ನು ಒದಗಿಸಿಕೊಡಲು ವಿಶೇಷವಾಗಿ ನಮ್ಮ ಸರ್ಕಾರ ಆದ್ಯತೆ ನೀಡುತ್ತಿದೆ ಎಂದರು.