ಸಿಎಸ್‌ಆರ್‌ ಫಂಡ್‌ ಬಳಸಿ ಶಾಲೆಗಳ ಅಭಿವೃದ್ಧಿ

Oct 23 2024, 02:00 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಬಬಲೇಶ್ವರ ಮತಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಸಿಎಸ್ಆರ್ ಫಂಡ್‌ನಲ್ಲಿ ನಾನಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ವಿಧಾನ ಪರಿಷತ್‌ ಸದಸ್ಯ ಸುನೀಲಗೌಡ ಪಾಟೀಲ ಹೇಳಿದರು. ಬಬಲೇಶ್ವರ ತಾಲೂಕಿನ ನಿಡೋಣಿಯಲ್ಲಿ ಕೆ.ಆರ್.ಐ.ಡಿ.ಎಲ್. ವತಿಯಿಂದ ₹ 50 ಲಕ್ಷ ವೆಚ್ಚದಲ್ಲಿ ಅಲ್ಪಸಂಖ್ಯಾತರ ಕಾಲೋನಿಗಳಲ್ಲಿ ಸಿಸಿ ರಸ್ತೆ ಕಾಮಗಾರಿ ಮತ್ತು ಪಿ.ಆರ್.ಇ.ಡಿ ವತಿಯಿಂದ ₹100 ಲಕ್ಷ ವೆಚ್ಚದಲ್ಲಿ ನಿಡೋಣಿ-ತಿಗಣಿ-ಬಿದರಿ ರಸ್ತೆ ಸುಧಾರಣೆ ಕಾಮಗಾರಿ ಹಾಗೂ ಶೇಗುಣಸಿ ಗ್ರಾಮದಲ್ಲಿ ಕೆ.ಆರ್.ಐ.ಡಿ.ಎಲ್. ವತಿಯಿಂದ ₹ 25 ಲಕ್ಷ ವೆಚ್ಚದಲ್ಲಿ ಅಲ್ಪಸಂಖ್ಯಾತರ ಕಾಲೋನಿಗಳಲ್ಲಿ ಸಿಸಿ ರಸ್ತೆ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.