ಸಮಗ್ರ, ಸಮತೋಲಿತ ಅಭಿವೃದ್ಧಿ ಕ್ರಮಗಳಿಗೆ ಆದ್ಯತೆ
Feb 21 2025, 12:51 AM ISTಸರ್ಕಾರವು ಡಾ.ಡಿ.ಎಂ.ನಂಜುಂಡಪ್ಪ ವರದಿಯನ್ನು 2007-08 ರಿಂದ ಜಾರಿಗೊಳಿಸಿರುತ್ತದೆ. ಪ್ರಸ್ತುತ ಸಂದರ್ಭದಲ್ಲಿ ಈಗಿನ ಕಾಲಕ್ಕೆ ಅನುಗುಣವಾಗಿ ಈ ವರದಿಯ ಪುನರ್ ವಿಮರ್ಶೆ ಮಾಡುವುದರ ಜತೆಗೆ ಸದ್ಯದ ಮಾನವ ಅಭಿವೃದ್ಧಿ ಸೂಚ್ಯಂಕ ಆಧರಿಸಿ ಹೊಸ ಮಾರ್ಗಸೂಚಿ ಅಥವಾ ಶಿಫಾರಸ್‌ಗಳ ಅಗತ್ಯವಿದೆ. ಆದ್ದರಿಂದ ಸಮಿತಿಯು 40-50 ಸೂಚ್ಯಂಕಗಳನ್ನು ಪಟ್ಟಿ ಮಾಡಿಕೊಂಡಿದ್ದು, ಅವುಗಳ ಆಧಾರದ ಮೇಲೆ ವಿಸ್ತೃತವಾಗಿ ಅಧ್ಯಯನ ಕೈಗೊಂಡು ಅಗತ್ಯ ಕ್ರಮಗಳನ್ನು ಸಮಿತಿಯು ಶಿಫಾರಸ್ ಮಾಡಲಿದೆ ಎಂದು ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಅಧ್ಯಕ್ಷ ಪ್ರೊ.ಎಂ.ಗೋವಿಂದರಾವ್ ಹೇಳಿದರು.