ರಿಂಗ್ ರೋಡ್ ನಿರ್ಮಾಣದ ಭೂಸ್ವಾಧೀನಕ್ಕಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಕಾನೂನು ಉಲ್ಲಂಘಿಸಿ, ಬೆದರಿಸಿ ರೈತರಿಂದ ಸಂದಾನಿತ ದರ ಒಪ್ಪಿಗೆ ಪತ್ರಕ್ಕೆ ಸಹಿ ಹಾಕಿಸಿಕೊಳ್ಳುತ್ತಿದ್ದು, ನಿಲ್ಲಿಸದಿದ್ದರೆ ಜೈಲ್ ಭರೋ ಚಳವಳಿ ನಡೆಸುವುದಾಗಿ ಪಿಆರ್ಆರ್ ರೈತ ಹಾಗೂ ನಿವೇಶನದಾರರ ಸಂಘ ಎಚ್ಚರಿಸಿದೆ.
ವಿವಿಧ ಅಗತ್ಯ ಕಾರ್ಯಕ್ರಮಗಳಿಗೆ ಹಣ ಕೊಡುವುದರ ಜೊತೆಗೆ ಹೆಚ್ಚುವರಿ ಗ್ಯಾರಂಟಿಗಳಿಗೆ ಅನುದಾನವನ್ನು ಒದಗಿಸುವಂತಹ ಪ್ರಮಾಣಿಕ ಪ್ರಯತ್ನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡುತ್ತಿದ್ದಾರೆ.
ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯವು ಆಂತರಿಕ ಆದಾಯದಲ್ಲೇ ಶಕ್ತಿ ಮೀರಿ ಕಾರ್ಯನಿರ್ವಹಿಸುತ್ತಿದೆ. ಸಾವಿರಾರು ಹಸ್ತಪ್ರತಿಗಳ ಡಿಜಿಟಲೀಕರಣ, ಭಾಷಾಂತರ, ಪ್ರಕಟಣೆ ಸೇರಿ ಮಾಡಬೇಕಾದ ಕಾರ್ಯಗಳು ಇನ್ನೂ ಸಾಕಷ್ಟಿದೆ. ಆದರೆ, ಇದಕ್ಕೆಲ್ಲ ಸಾಕಷ್ಟು ಅನುದಾನವಿಲ್ಲದೆ ಸೊರಗುತ್ತಿದೆ.