ಹಳ್ಳಿಗಳ ಅಭಿವೃದ್ಧಿಯಿಂದ ದೇಶದ ಅಭಿವೃದ್ಧಿ
Sep 05 2024, 12:35 AM ISTಕನ್ನಡಪ್ರಭ ವಾರ್ತೆ ಮೋಳೆ ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ನಮ್ಮ ಕ್ಷೇತ್ರದ ರಸ್ತೆಗಳ ಅಭಿವೃದ್ಧಿಯ ಜೊತೆಗೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರದಿಂದ ಅನುದಾನ ತರಲಾಗಿದ್ದು, ಗುತ್ತಿಗೆದಾರರು ಉತ್ತಮ ಗುಣಮಟ್ಟದ ಕಾಮಗಾರಿ ಮಾಡಬೇಕು. ಸಾರ್ವಜನಿಕರು ಕಳಪೆ ಕಾಮಗಾರಿಯ ಬಗ್ಗೆ ನಿಗಾವಹಿಸಬೇಕು ಎಂದು ಶಾಸಕ ರಾಜು ಕಾಗೆ ಹೇಳಿದರು.