ಕೊಲ್ಲೂರು, ಕುಕ್ಕೆ ಕ್ಷೇತ್ರಗಳಿಗೂ ಅಭಿವೃದ್ಧಿ ಪ್ರಾಧಿಕಾರ ರಚನೆ: ರಾಮಲಿಂಗ ರೆಡ್ಡಿ
Jun 25 2025, 01:18 AM ISTಈಗಾಗಲೇ ಮಲೆಮಹದೇಶ್ವರ ಬೆಟ್ಟ, ಮೈಸೂರಿನ ಚಾಮುಂಡಿ ಬೆಟ್ಟ, ರೇಣುಕಾ ಎಲ್ಲಮ್ಮ, ಹುಲಿಯಮ್ಮ ದೇವಸ್ಥಾನ, ಘಾಟಿ ಸುಬ್ರಮಣ್ಯ ಕ್ಷೇತ್ರಗಳ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆ ಮಾಡಲಾಗಿದೆ. ಅದೇ ರೀತಿ ಕೊಲ್ಲೂರು ಹಾಗೂ ಕುಕ್ಕೆ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆ ಮಾಡುವ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ ಎಂದು ರಾಜ್ಯದ ಮುಜರಾಯಿ ಹಾಗೂ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ.