ಅವಳಿ ನಗರ ಸಮಗ್ರ ಅಭಿವೃದ್ಧಿ ಕುರಿತು ನೀಲನಕ್ಷೆ ಸಿದ್ಧಪಡಿಸಿ: ಖರ್ಗೆ
Jul 17 2025, 12:31 AM ISTಹುಬ್ಬಳ್ಳಿ- ಧಾರವಾಡ ರಾಜ್ಯದ ಎರಡನೇ ರಾಜಧಾನಿಯಂದೇ ಬಿಂಬಿತವಾಗಿದೆ. ಅತೀ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದಾಗಿದೆ. ನಗರವನ್ನು ಇನ್ನಷ್ಟು ಸುಂದರ ಮತ್ತು ಮಾದರಿ ನಗರವಾನ್ನಾಗಿಸುವ ಅವಶ್ಯಕತೆ ಇದ್ದು, ಮಾಸ್ಟರ್ ಪ್ಲಾನ್ ಅವಶ್ಯಕತೆಯಿದೆ. ಹೀಗಾಗಿ ಹು-ಧಾ ಮಹಾನಗರ ಪಾಲಿಕೆ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಸಂಬಂಧಪಟ್ಟ ಇಲಾಖೆಗಳ ಸಹಯೋಗದೊಂದಿಗೆ ನಿಗದಿ ಪಡಿಸಿದ ಸಂಸ್ಥೆಗಳಿಗೆ ಸಮಗ್ರ ಮಾಹಿತಿ ನೀಡಬೇಕು.