ಸಂಘಟನೆಗಳು ಬಲಿಷ್ಟವಾದರೆ ಸಮಾಜದ ಅಭಿವೃದ್ಧಿ: ನಿರ್ಮಲಾನಂದನಾಥ ಸ್ವಾಮೀಜಿ
Mar 23 2024, 01:04 AM ISTಸಮಾಜದ ಅಭಿವೃದ್ಧಿಗೆ ಸಂಘಟನೆ ಮುಖ್ಯ. ಎಲ್ಲರೂ ಸಂಘಟನೆಗೆ ಹೆಚ್ಚು ಒತ್ತು ನೀಡಬೇಕು. ಸಂಘಟನೆಗಳು ಬಲಿಷ್ಠವಾದಷ್ಟು ಅಭಿವೃದ್ಧಿಗೆ ಪೂರಕವಾಗುತ್ತದೆ. ಆದ್ದರಿಂದ ಎಲ್ಲರೂ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಸಂಘಟನೆಗೆ ಒತ್ತು ನೀಡಬೇಕು. ಒಕ್ಕಲಿಗ ಸಮಾಜವನ್ನು ಉತ್ತಮವಾಗಿ ಕಟ್ಟಿ ಬೆಳೆಸುವ ಜತೆಗೆ ಶಾಲಾ-ಕಾಲೇಜುಗಳು, ಸಮುದಾಯ ಭವನಗಳನ್ನು ನಿರ್ಮಾಣ ಮಾಡಿ ಸಮಾಜದಲ್ಲಿ ಸೇವೆಯನ್ನು ಕೈಗೊಳ್ಳಬೇಕು.