ಶೆಟ್ಟರ್ ಹಿಂದಿನಿಂದಲೂ ಬೆಳಗಾವಿ ಅಭಿವೃದ್ಧಿ ವಿರೋಧಿ
May 06 2024, 12:35 AM ISTಕನ್ನಡಪ್ರಭ ವಾರ್ತೆ ಬೆಳಗಾವಿ ಅಭಿವೃದ್ಧಿ ಯೋಜನೆಗಳು ಹುಬ್ಬಳ್ಳಿ ದಾಟಿ ಬೆಳಗಾವಿಗೆ ಬರದಂತೆ ತಡೆಯೊಡ್ಡುತ್ತ ಬಂದಿರುವ ಬಿಜೆಪಿ ಅಭ್ಯರ್ಥಿಯನ್ನು ತಿರಸ್ಕರಿಸುವ ಮೂಲಕ ಸರಿಯಾದ ಪಾಠ ಕಲಿಸಲಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಶ್ವಾಸ ವ್ಯಕ್ತಪಡಿಸಿದರು.ತಮ್ಮ ಗೃಹ ಕಚೇರಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಹಿಂದಿನಿಂದಲೂ ಬೆಳಗಾವಿ ಅಭಿವೃದ್ಧಿಯ ವಿರೋಧಿ. ಸಾಧ್ಯವಾದಾಗಲೆಲ್ಲ ಬೆಳಗಾವಿಯಿಂದ ಯೋಜನೆಗಳನ್ನು ಕಿತ್ತುಕೊಂಡಿದ್ದೇ ಹೆಚ್ಚು.