ದೆಹಲಿಯಲ್ಲಿ ಮುಂದಿನ ವರ್ಷ ಫೆಬ್ರವರಿಯಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ಸಿಎಂ ಅಭ್ಯರ್ಥಿ ಯಾರಾಗಬೇಕು ಎಂಬ ತಲಾಶೆ ಆರಂಭಿಸಿದ್ದು, ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೆಸರು ಮುಂಚೂಣಿಯಲ್ಲಿದೆ ಎಂಬ ಗುಸುಗುಸು ಕೇಳಿಬರುತ್ತಿದೆ.
ತುಮಕೂರಿನಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ) ನೇಮಕಾತಿ ಪರೀಕ್ಷೆ ವೇಳೆ ಬ್ಲೂಟೂತ್ ಬಳಸಿ ಉತ್ತರ ಬರೆಯಲು ಯತ್ನಿಸುತ್ತಿದ್ದ ಆರೋಪಿ ಧರ್ಮೇಂದ್ರ, ಕ್ಯಾಮೆರಾ ಇರುವ ಎಲೆಕ್ಟ್ರಾನಿಕ್ ಸಾಧನ, ವೈಫೈ ಸಹಿತ ಇಂಟರ್ನೆಟ್ ಡಾಂಗಲ್‌ನೊಂದಿಗೆ ಪ್ರವೇಶಿಸಿರುವುದು ಪೊಲೀಸ್ ತನಿಖೆಯಲ್ಲಿ ಪತ್ತೆಯಾಗಿದೆ.
ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಅವರ ಪತಿ ಈ.ತುಕಾರಾಂ ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆದ್ದು ಲೋಕಸಭೆ ಪ್ರವೇಶಿಸಿದರು. ಇದೀಗ ಉಪ ಚುನಾವಣೆಯಲ್ಲಿ ತುಕಾರಾಂ ಪತ್ನಿ ಅನ್ನಪೂರ್ಣ ಗೆಲುವು ಪಡೆದು ವಿಧಾನಸಭೆ ಪ್ರವೇಶ ಪಡೆದಿದ್ದಾರೆ.