ಕೊಡಗು ಮೈಸೂರು ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಪ್ರಣಾಳಿಕೆ ಬಿಡುಗಡೆ
Apr 18 2024, 02:16 AM ISTಮೈಸೂರು - ಕೊಡಗು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್, ಕೊಡಗು - ಮೈಸೂರು ಜಿಲ್ಲೆಗೆ ಸಂಬಂಧಿಸಿದಂತೆ ಪ್ರಣಾಳಿಕೆಯನ್ನು ಬುಧವಾರ ಮಡಿಕೇರಿ ಖಾಸಗಿ ಸಭಾಂಗಣದಲ್ಲಿ ಬಿಡುಗಡೆ ಮಾಡಿದರು. ಈ ಸಂದರ್ಭ ಮಾತನಾಡಿದ ಅವರು, ಮುಖ್ಯಮಂತ್ರಿ ಅನುಮತಿ ಪಡೆದು ಪ್ರಣಾಳಿಕೆ ಬಿಡುಗಡೆ ಮಾಡುತ್ತಿದ್ದೇನೆ. 21ರಂದು ಮೈಸೂರಿನಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.