15 ರಂದು ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ನಾಮಪತ್ರ ಸಲ್ಲಿಕೆ
Apr 09 2024, 12:49 AM ISTಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ ಏ.15ರಂದು ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ. ಅಂದು ಬೆಳಗ್ಗೆ 6 ಗಂಟೆಗೆ ಸುಳೇಬಾವಿ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಾಮಪತ್ರಕ್ಕೆ ಪೂಜೆ ಸಲ್ಲಿಸುವ ಮೃಣಾಲ ಹೆಬ್ಬಾಳಕರ, ನಂತರ 11 ಗಂಟೆಗೆ ಹಿಂಡಲಗಾ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಅಲ್ಲಿಂದ ರ್‍ಯಾಲಿ ಆರಂಭಿಸಲಿದ್ದಾರೆ.