ಮದುವೆಯಲ್ಲಿ ಪ್ರಚಾರ ನಡೆಸಿದ್ರೆ ಅಭ್ಯರ್ಥಿ ಲೆಕ್ಕಕ್ಕೆ ಖರ್ಚು: ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಕೆ
Mar 18 2024, 01:46 AM ISTಮದುವೆ, ಖಾಸಗಿ ಸಮಾರಂಭ ಹಾಗೂ ಮುಂತಾದ ಸಭೆಗಳಲ್ಲಿ ರಾಜಕೀಯ ಮುಖಂಡರು, ಅಭ್ಯರ್ಥಿ ಪಾಲ್ಗೊಳ್ಳಲು ಯಾವುದೇ ನಿರ್ಬಂಧವಿಲ್ಲ. ಆದರೆ ಈ ಸ್ಥಳಗಳಲ್ಲಿ ಚುನಾವಣೆ ಪ್ರಚಾರ ಮಾಡುವಂತಿಲ್ಲ. ಒಂದು ಪ್ರಚಾರ ನಡೆಸಿರುವುದು ಕಂಡುಬಂದರೆ ಇಡೀ ಮದುವೆ ಖರ್ಚು-ವೆಚ್ಚಗಳು ಅಭ್ಯರ್ಥಿಯ ಚುನಾವಣೆ ವೆಚ್ಚಕ್ಕೆ ಸೇರಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಸಿದ್ದಾರೆ.