ಪೇದೆ ನೇಮಕಾತಿಯಿಂದ ಅಭ್ಯರ್ಥಿ ಹೆಸರು ಕೈಬಿಟ್ಟಿದ್ದಕ್ಕೆ ಹೈಕೋರ್ಟ್ ಒಪ್ಪಿಗೆ
Oct 29 2023, 01:01 AM ISTಕ್ರಿಮಿನಲ್ ಪ್ರಕರಣದ ಮಾಹಿತಿಯನ್ನು ಪೊಲೀಸ್ ಪೇದೆ ನೇಮಕಾತಿಗೆ ಸಲ್ಲಿಸಿದ್ದ ಅರ್ಜಿಯಲ್ಲಿ ಬಹಿರಂಗಪಡಿಸಿದ ಹಿನ್ನೆಲೆಯಲ್ಲಿ ಸಂಭಾವ್ಯ ಆಯ್ಕೆ ಪಟ್ಟಿಯಿಂದ ಅಭ್ಯಥಿಯೋರ್ವರ ಹೆಸರು ಕೈಬಿಟ್ಟಿದ್ದ ರಾಜ್ಯ ಪೊಲೀಸ್ ಇಲಾಖೆಯ ಕ್ರಮವನ್ನು ಹೈಕೋರ್ಟ್ ಪುರಸ್ಕರಿಸಿದೆ.ಪೊಲೀಸ್ ಇಲಾಖೆಯ ಕ್ರಮ ಪ್ರಶ್ನಿಸಿ ಬೀದರ್ ಜಿಲ್ಲೆಯ ಎಕ್ಲೂರುವಾಡಿ ಗ್ರಾಮದ ನಿವಾಸಿ ನಾರಾಯಣ ಜಾಮದಾರ್ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಮೂರ್ತಿಗಳಾದ ಮೊಹಮ್ಮದ್ ನವಾಜ್ ಮತ್ತು ಕೆ.ರಾಜೇಶ್ ರೈ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.