ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್‌ನವರು ಯಾವ ಅಭ್ಯರ್ಥಿಯನ್ನಾದರೂ ಹಾಕಲಿ, ನಮ್ಮದು ಕೇವಲ ದೇವೇಗೌಡರ ಕುಟುಂಬ ಅಲ್ಲ, ನಮ್ಮದು ಈಗ ಎನ್‌ಡಿಎ ಕುಟುಂಬ. ಎನ್‌ಡಿಎ ಕುಟುಂಬದಿಂದ ಒಬ್ಬ ಅಭ್ಯರ್ಥಿ ಇರುತ್ತಾನೆ. ಅಭ್ಯರ್ಥಿ ಆಯ್ಕೆಯಲ್ಲಿ ಯಾವ ಜಂಜಾಟವೂ ಇಲ್ಲ.
ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆಯಲ್ಲಿ ನಾನೇ ಅಭ್ಯರ್ಥಿ ಅಂತ ಯಾರು ಬೇಕಾದರು ಹೇಳಿಕೊಳ್ಳಬಹುದು. ರಾಜಕೀಯ ವಾಸ್ತವಾಂಶಗಳ ಬಗ್ಗೆ ಲೆಕ್ಕಾಚಾರ ಮಾಡಿಯೇ ಉಭಯ ಪಕ್ಷಗಳ ಹಿರಿಯ ನಾಯಕರೊಂದಿಗೆ ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದರು.
ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆಗೆ ಜೆಡಿಎಸ್ - ಬಿಜೆಪಿ ಮೈತ್ರಿ ಅಭ್ಯರ್ಥಿಯನ್ನು ದೆಹಲಿ ಮಟ್ಟದಲ್ಲಿ ಬಿಜೆಪಿ ವರಿಷ್ಠರು ಹಾಗೂ ನಾವು ಚರ್ಚಿಸಿ ಇನ್ನೊಂದು ವಾರದಲ್ಲಿ ತೀರ್ಮಾನ ಮಾಡುತ್ತೇವೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದರು.