ಭಾರತೀಯ ಚುನಾವಣಾ ವ್ಯವಸ್ಥೆಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿರುವ ವಿಶ್ವದ ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್, ಅದೇ ವೇಳೆ ಅಮೆರಿಕದಲ್ಲಿನ ವ್ಯವಸ್ಥೆಯ ಬಗ್ಗೆ ತರಾಟೆಗೆ ತೆಗೆದುಕೊಂಡಿದ್ದಾರೆ.
ಅಮೆರಿಕ ಮೂಲದ ರೈಸ್ ವಿಶ್ವವಿದ್ಯಾಲಯವು ಭಾರತದಲ್ಲಿ ‘ರೈಸ್ ಗ್ಲೋಬಲ್ ಇಂಡಿಯಾ’ ಸಂಸ್ಥೆಯನ್ನು ಅನಾವರಣಗೊಳಿಸಿದೆ. ತನ್ಮೂಲಕ ಭಾರತದ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ಶೈಕ್ಷಣಿಕ ಹಾಗೂ ಸಂಶೋಧನಾ ಕಾರ್ಯಕ್ರಮಗಳ ಉತ್ತೇಜನಕ್ಕಾಗಿ ಬೆಂಗಳೂರಿನ ಐಐಎಸ್ಸಿ ಮತ್ತು ಕಾನ್ಪುರದ ಐಐಟಿಯೊಂದಿಗೆ ಒಪ್ಪಂದ ಮಾಡಿಕೊಂಡಿದೆ.
ಡೊನಾಲ್ಡ್ ಟ್ರಂಪ್, ತಮ್ಮ ಕಟ್ಟಾ ಬೆಂಬಲಿಗರಾದ ಹಿಂದೂ ಸಂಸದೆ ತುಳಸಿ ಗಬ್ಬಾರ್ಡ್ ಅವರನ್ನು ರಾಷ್ಟ್ರೀಯ ಗುಪ್ತಚರ ವಿಭಾಗದ ನಿರ್ದೇಶಕಿಯಾಗಿ ನೇಮಿಸಿದ್ದಾರೆ. ಈ ಮೂಲಕ ವಿವೇಕ್ ರಾಮಸ್ವಾಮಿ ಬಳಿಕ ಮತ್ತೊಬ್ಬ ಹಿಂದೂ ಧರ್ಮೀಯರಿಗೆ ಟ್ರಂಪ್ ಆಡಳಿತದಲ್ಲಿ ಮಹತ್ವದ ಹುದ್ದೆ ಲಭಿಸಿದಂತಾಗಿದೆ.
ತಮ್ಮ ಪರವಾಗಿ ಗಟ್ಟಿಯಾಗಿ ನಿಂತು ಪ್ರಚಾರ ಮಾಡಿ, ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ಹಾಗೂ ಮೈಸೂರು ನಂಟು ಹೊಂದಿರುವ ಅಮೆರಿಕ ಉದ್ಯಮಿ ವಿವೇಕ್ ರಾಮಸ್ವಾಮಿ ಅವರಿಗೆ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ ಸರ್ಕಾರದಲ್ಲಿ ಪ್ರಮುಖ ಹುದ್ದೆ ನೀಡಿದ್ದಾರೆ.