ಕಾಡು ಪ್ರಾಣಿಗಳ ಉಪಟಳ ತಪ್ಪಿಸದ ಅರಣ್ಯ ಇಲಾಖೆ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ
Feb 07 2024, 01:47 AM ISTಸಾಗರ ತಾಲೂಕಿನ ಚಿಪ್ಳಿ ಲಿಂಗದಹಳ್ಳಿಯಲ್ಲಿ ಕಾಡು ಪ್ರಾಣಿಗಳು ಕಾಣಿಸಿರುವ ಬಗ್ಗೆ ಸಾರ್ವಜನಿಕರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಕ್ರಮ ತೆಗೆದುಕೊಳ್ಳದೇ, ನಿರ್ಲಕ್ಷ್ಯ ವಹಿಸಿದ್ದಾರೆ. ಗ್ರಾಮದಲ್ಲಿ ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ಚಿರತೆ ಕಾಣಿಸಿಕೊಂಡಿದೆ. ಇಲಾಖೆಗೆ ಮಾಹಿತಿ ಮುಟ್ಟಿಸಿದಾಗ ಬೆಳಗ್ಗೆ ಬರುವುದಾಗಿ ಹೇಳಿ, ಸೋಮವಾರ ಮಧ್ಯಾಹ್ನ 2 ಗಂಟೆ ಸ್ಥಳಕ್ಕೆ ಬಂದಿದ್ದಾರೆ. ಸಿಬ್ಬಂದಿ ವಾಚ್‌ಗಾರ್ಡ್ ಸ್ಥಳೀಯರೊಂದಿಗೆ ಮಾತುಕತೆ ನಡೆಸಿ, ಚಿರತೆ ನೋಡಿದ ಪ್ರತ್ಯಕ್ಷದರ್ಶಿಗಳು, ಚಿರತೆ ಫೋಟೋ, ವೀಡಿಯೊ ತಂದುಕೊಟ್ಟರೆ ಮಾತ್ರ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ. ನೀವು ಚಿರತೆಯದೆಂದು ತೋರಿಸುವ ಕಾಲಿನ ಗುರುತುಗಳನ್ನೆಲ್ಲ ಗಮನಿಸಿಕೊಂಡು ಕೂರಲು ಆಗುವುದಿಲ್ಲ ಎಂದು ಹೇಳಿ ಅಲ್ಲಿಂದ ತೆರಳಿದ್ದಾರೆ ಎನ್ನಲಾಗಿದೆ. ಇದರಿಂದ ಗ್ರಾಮಸ್ಥರು ಆಕ್ರೋಶಗೊಂಡಿದ್ದಾರೆ.