ರಾಜ್ಯ ಅರಣ್ಯ ಇಲಾಖೆ ಸಿಬ್ಬಂದಿ ಬಹುದಿನದ ಬೇಡಿಕೆಯಾದ ‘ಅರಣ್ಯ ಕ್ಯಾಂಟೀನ್’ ಸ್ಥಾಪನೆಗೆ ಇಲಾಖೆ ಮುಂದಾಗಿದ್ದು, ಚುನಾವಣೆ ಮುಗಿದ ನಂತರ ಆ ಕುರಿತು ಸ್ಪಷ್ಟ ನಿರ್ಧಾರ ತೆಗೆದುಕೊಂಡು ಕ್ಯಾಂಟೀನ್ ಸ್ಥಾಪನೆಗೆ ರೂಪುರೇಷೆ ಸಿದ್ಧಪಡಿಸಲು ನಿರ್ಧರಿಸಲಾಗಿದೆ.