ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ
Feb 26 2024, 01:31 AM ISTಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೆ ಮೃತಪಟ್ಟಿದ್ದಾರೆ. ಇದನ್ನು ಖಂಡಿಸಿ ಕುಟುಂಬಸ್ಥರು, ಗ್ರಾಮಸ್ಥರು ಕೆ.ಆರ್. ಆಸ್ಪತ್ರೆಯ ಶವಾಗಾರದ ಮುಂದೆ ರೈತನ ಶವವಿಟ್ಟು ಅರಣ್ಯ ಇಲಾಖೆಯ ವಿರುದ್ಧ ಪ್ರತಿಭಟಿಸಿದರು. ಮೃತನ ಕುಟುಂಬಕ್ಕೆ 20 ಲಕ್ಷ ರು. ಪರಿಹಾರ ಹಾಗೂ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ಕೆಲಸ ನೀಡುವುದರ ಜೊತೆಗೆ ಅರಣ್ಯಾಧಿಕಾರಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.