ಸಾಂಸ್ಕೃತಿಕ ನಗರಿ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಶುಕ್ರವಾರ ಮಧ್ಯಾಹ್ನ 12.30ರ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 200 ಎಕರೆ ಅರಣ್ಯ ಭಸ್ಮವಾಗಿದೆ. ಚಾಮುಂಡಿಬೆಟ್ಟದ ತಪ್ಪಲಿನ ಉತ್ತನಹಳ್ಳಿ ಭಾಗದಲ್ಲಿ ಬೆಂಕಿ ಹೊತ್ತಿ ಲಲಿತಾದ್ರಿಪುರ ಭಾಗದವರೆಗೂ ಹರಡಿತ್ತು
ರಾಜ್ಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥರನ್ನಾಗಿ ಹಿರಿಯ ಐಎಫ್ಎಸ್ ಅಧಿಕಾರಿ ಮೀನಾಕ್ಷಿ ನೇಗಿ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ
ಕಡಹಿನಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಠಲ ಗ್ರಾಮದ ಹಾಗಲಮನೆ, ಹಳೇದಾನಿ ವಾಸ, ಮುದುಕೂರು ಭಾಗದ ಭದ್ರಾ ಹಿನ್ನೀರಿನ ತಟದಲ್ಲಿ 25 ರಿಂದ 30 ಕಾಡಾನೆಗಳ ಹಿಂಡು ಬೀಡು ಬಿಟ್ಟಿದ್ದು ಅರಣ್ಯ ಇಲಾಖೆ ಕಾರ್ಯಾಚಾರಣೆ ನಡೆಸಿ ಭದ್ರಾ ಅಭಯಾರಣ್ಯಕ್ಕೆ ಓಡಿಸುವ ಪ್ರಯತ್ನ ಮುಂದುವರಿಸಿದ್ದಾರೆ.