ರಸ್ತೆ ಕಾಮಗಾರಿಗೆ ಅರಣ್ಯ ಇಲಾಖೆ ತೊಡಕು ಆರೋಪ: ಸಾರ್ವಜನಿಕರಿಂದ ಕಚೇರಿಗೆ ಮುತ್ತಿಗೆ
Feb 02 2025, 11:47 PM ISTಲೋಕಪಯೋಗಿ ಇಲಾಖೆಯಿಂದ ಶನಿವಾರಸಂತೆ, ದುಂಡಳ್ಳಿ, ಚಂಗಡಹಳ್ಳಿ ಮಾರ್ಗವಾಗಿ ಯಸಳೂರುಗೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ 2023ರಲ್ಲಿ ಚಾಲನೆ ನೀಡಿದ್ದರೂ ಅರಣ್ಯ ಇಲಾಖೆಯವರು ರಸ್ತೆ ಬದಿಯಲ್ಲಿರುವ ಮರಗಳನ್ನು ತೆರವುಗೊಳಿಸದಿರುವ ಹಿನ್ನೆಲೆ ಕಾಮಗಾರಿ ಸ್ಥಗಿತಗೊಂಡಿದೆ. ಇದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದ ಎಂದು ಆರೋಪಿಸಿ, ಶನಿವಾರ ದುಂಡಳ್ಳಿ ಸೇರಿದಂತೆ ಅಕ್ಕಪಕ್ಕದ ಗ್ರಾಮಸ್ಥರು, ಸಾರ್ವಜನಿಕರು, ಪ್ರಮುಖರು ಶನಿವಾರಸಂತೆ ಅರಣ್ಯ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.