ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಮಾನ್ಯತೆ ಪಡೆಯಲು ಕಾಲೇಜಿನ ಒಟ್ಟು ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಶೇ.50 ರಷ್ಟು ಅಲಸಂಖ್ಯಾತ ವಿದ್ಯಾರ್ಥಿಗಳು ಇರಬೇಕೆಂಬ ನಿಯಮವನ್ನು ರದ್ದುಪಡಿಸಲು ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ವಕ್ಫ್ ಆಸ್ತಿ ವಿವಾದ ಹಾಗೂ ಗುತ್ತಿಗೆಗಳಲ್ಲಿ ಮುಸ್ಲಿಂ ಮೀಸಲಾತಿ ಬೇಡಿಕೆ ಬೆನ್ನಲ್ಲೇ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಮಾನ್ಯತೆಗೆ ಹೊಂದಿರಬೇಕಾಗಿದ್ದ ಷರತ್ತು ಸಡಿಲಿಕೆ ಮಾಡುವ ವಿಧೇಯಕವನ್ನು ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲು ಸರ್ಕಾರ ಸಜ್ಜಾಗಿದೆ.