ವಿದ್ಯುತ್ ಅವಘಡ ತಡೆಯುವ ಕುರಿತು ಜನ ಜಾಗೃತಿ
Dec 16 2023, 02:00 AM ISTವಿದ್ಯುತ್ ಅಪಘಾತ ತಡೆಯುವ ಸಪ್ತಾಹದ ಅಂಗವಾಗಿ ಬೆಸ್ಕಾಂ ತುಮಕೂರು ವಿಭಾಗದ ವತಿಯಿಂದ ವಿದ್ಯುತ್ ಸುರಕ್ಷತಾ ಜಾಥಾವನ್ನು ನಗರದಲ್ಲಿ ನಡೆಸಲಾಯಿತು. ನಗರದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಿಂದ ಆರಂಭವಾದ ವಿದ್ಯುತ್ ಸುರಕ್ಷತಾ ಜನಜಾಗೃತಿ ಜಾಥಾಕ್ಕೆ ಬೆಸ್ಕಾಂ ಅಧೀಕ್ಷಕ ಎಂಜಿನಿಯರ್ ಎಚ್.ವಿ. ಕೃಷ್ಣ ಪ್ರಸಾದ್ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಸಾರ್ವಜನಿಕರು, ರೈತರು, ಶಾಲಾ ಮಕ್ಕಳು ಹಾಗೂ ಬೆಸ್ಕಾಂ ಸಿಬ್ಬಂದಿಗೆ ವಿದ್ಯುತ್ ಅಪಘಾತವನ್ನು ತಡೆಯುವ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಜಾಥಾ ನಡೆಸಲಾಗುತ್ತಿದೆ ಎಂದರು.