ರಾಜ್ಯಪಾಲರ ವಾಪಸ್ಸು ಕರೆಸಿಕೊಳ್ಳಲು ಅಹಿಂದ ಆಗ್ರಹ
Aug 19 2024, 12:54 AM ISTತರೀಕೆರೆ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿರುವ ಅಕ್ರಮಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ತನಿಖೆ ನಡೆಸಲು ರಾಜ್ಯಪಾಲ ಥಾವರಚಂದ್ ಗೆಹಲೋಟ್ ಅನುಮತಿ ನೀಡಿರುವುದನ್ನು ಖಂಡಿಸಿ ಅಹಿಂದ ಸಂಘಟನೆ ವಿರೋಧಿಸುತ್ತಿದ್ದು, ಇದು ಸಂವಿಧಾನ ಮತ್ತು ಕಾನೂನು ಬಾಹಿರವಾಗಿರುವುದರಿಂದ ರಾಷ್ಟ್ರಪತಿಗಳು ಮಧ್ಯೆ ಪ್ರವೇಶಿಸಿ ಈ ಕೂಡಲೇ ರಾಜ್ಯಪಾಲರನ್ನು ವಾಪಸ್ಸು ಕರೆಸಿ ಕೊಳ್ಳಬೇಕೆಂದು ಅಹಿಂದ ಸಂಘಟನೆ ಮುಖಂಡರು ಆಗ್ರಹಿಸಿದ್ದಾರೆ.