ಮಾದಪ್ಪನ ಜಾತ್ರೆ: ಭಕ್ತರಿಂದ 5 ದಿನದಲ್ಲಿ 2 ಕೋಟಿ ಆದಾಯ
Nov 17 2023, 06:45 PM ISTರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಒಂದಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಕಳೆದ 10 ರಿಂದ 14 ರವರೆಗೆ ಅದ್ಧೂರಿಯಾಗಿ ದೀಪಾವಳಿ ಜಾತ್ರೆ ನಡೆದಿದ್ದು, ಕೇವಲ 5 ದಿನಗಳ ಅವಧಿಯಲ್ಲಿ ಕ್ಷೇತ್ರಕ್ಕೆ 2.8 ಕೋಟಿ ರು.ಗೂ ಹೆಚ್ಚು ಆದಾಯ ಹರಿದು ಬಂದಿದೆ.ಮಲೆಮಹದೇಶ್ವರ ಬೆಟ್ಟದಲ್ಲಿ ಚಿನ್ನದ ರಥ ಸೇವೆ, ರುದ್ರಾಕ್ಷಿ ವಾಹನ, ಬೆಳ್ಳಿ ರಥ, ಲಾಡು ಮಾರಾಟ, ಮಿಶ್ರ ಪ್ರಸಾದ ಮಾರಾಟ, ಪಾರ್ಕಿಂಗ್, ವಿಶೇಷ ದರ್ಶನದ ಟಿಕೆಟ್ ಸೇರಿದಂತೆ ವಿವಿಧ ಸೇವೆಗಳಿಂದ 2,08,82,110 ರು. ಆದಾಯ ಬಂದಿದ್ದು, ಇದರಲ್ಲಿ ಹುಂಡಿ ಹಣ ಸೇರಿಲ್ಲ.