ಪಹಣಿಗೆ ಆಧಾರ್ ಜೋಡಣೆಯಲ್ಲಿ ಜಿಲ್ಲೆಗೆ 3ನೇ ಸ್ಥಾನ: ಡಿಸಿ
Jun 18 2024, 12:49 AM ISTಕಂದಾಯ ಇಲಾಖೆ ಸಂಪೂರ್ಣ ಡಿಜಿಟಲೀಕರಣವಾಗುತ್ತಿದೆ. ಜಮೀನಿನ ಮಾಲಿಕರ ಪಹಣಿಗೆ ಆಧಾರ್ ಜೋಡಣೆ ಮಾಡುವ ಮೂಲಕ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಶೇ 64.73 ರಷ್ಟು ಖಾತೆದಾರರ ಆಧಾರ್ ಮಾಹಿತಿ ಪಹಣಿಗೆ ಜೋಡಿಸಿದ್ದು, ಈ ಸಾಧನೆಯಲ್ಲಿ ಜಿಲ್ಲೆ ರಾಜ್ಯದಲ್ಲೇ 3ನೇ ಸ್ಥಾನದಲ್ಲಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ದಾವಣಗೆರೆಯಲ್ಲಿ ಹೇಳಿದ್ದಾರೆ.