ಕಾಂತರಾಜ್ ಆಯೋಗ ವರದಿ ಅಂಗೀಕರಿಸಿ ಶೀಘ್ರ ಜಾರಿಗೊಳಿಸಿ
Nov 21 2023, 12:45 AM ISTಹಿಂದುಳಿದ ಜನಜಾಗೃತ ವೇದಿಕೆ ಅಧ್ಯಕ್ಷ ತೀ.ನ. ಶ್ರೀನಿವಾಸ್ ಮಾತನಾಡಿ, ಎಚ್.ಕಾಂತರಾಜ್ ಆಯೋಗದ ವರದಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಎಂದಿದ್ದರೂ, ಸದರಿ ಸಮೀಕ್ಷೆಯಲ್ಲಿ ಜಾತಿ ವಿವರಗಳು, ಸಾಮಾಜಿ, ಶೈಕ್ಷಣಿಕ ಹಾಗೂ ಆರ್ಥಿಕ ಸ್ಥಿತಿಗತಿಗಳನ್ನು ಕಲೆ ಹಾಕಲಾಗಿದೆ. ಹಿಂದುಳಿದ ಜಾತಿ- ವರ್ಗಗಳಿಗೆ ಸಂಜೀವಿನಿ ಆಗಿರುವ ಕಾಂತರಾಜ್ ಆಯೋಗದ ವರದಿಯನ್ನು ಸಾಮಾಜಿಕ ನ್ಯಾಯಕ್ಕೆ ಬದ್ಧರಾಗಿರುವ ಮುಖ್ಯಮಂತ್ರಿ ಅವರು ಶೀಘ್ರವೇ ಸ್ವೀಕರಿಸಿ ಅನುಷ್ಠಾನಗೊಳಿಸಿ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.