7ನೇ ವೇತನ ಆಯೋಗ ಯಥಾವತ್ತ ಜಾರಿ ಮಾಡಿ
Jul 13 2024, 01:37 AM ISTಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಪ್ರಮುಖ ಬೇಡಿಕೆಗಳಾದ ಏಳನೇ ವೇತನ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸುವುದು, ಎನ್ಪಿಎಸ್ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆ ಮರುಜಾರಿಗೊಳಿಸುವುದು, ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಬೇಕು ಎಂದು ಆಗ್ರಹಿಸಿ ತಾಲೂಕು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಮಂಗಾನವರ ನೇತೃತ್ವದಲ್ಲಿ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಮುಖಾಂತರ ರಾಜ್ಯ ಸರ್ಕಾರಕ್ಕೆ ಶುಕ್ರವಾರ ಮನವಿ ಸಲ್ಲಿಸಿದರು.